ಭಾರತೀಯ ಸೇನಾ ಪರೀಕ್ಷೆಯಲ್ಲಿ ಫೇಲ್ : ಮನನೊಂದು ಯುವಕ ನೇಣಿಗೆ ಶರಣು – Vishwanews24
ಭಾರತೀಯ ಸೇನಾ ಪರೀಕ್ಷೆಯಲ್ಲಿ ಫೇಲ್ – ಮನನೊಂದು ಯುವಕ ನೇಣಿಗೆ ಶರಣು
ಚಿಕ್ಕಮಗಳೂರು: ಯುವಕನೋರ್ವ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿಯ ಕಿಗ್ಗಾದ ಯಡದಾಳು ಗ್ರಾಮದಲ್ಲಿ ನಡೆದಿದೆ.
ಉಚ್ಚಿಲ : ಪರಿಯಾಳ ಸಮಾಜ ಸಮುದಾಯ ಭವನ ಉದ್ಘಾಟನಾ ಸಮಾರಂಭ: vishwanews24
ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಡೆತ್ ನೋಟ್ ನಲ್ಲಿ ಭಾರತೀಯ ಸೇನೆಯ ಪರೀಕ್ಷೆಯಲ್ಲಿ ನಾನು ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ ಎಂದು ಬರೆದಿಟ್ಟಿದ್ದಾರೆ. ಕಾರ್ತಿಕ್ ಸೇನೆಗೆ ಸೇರಬೇಕೆಂದು 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. ಸೇನಾ ನೇಮಕಾತಿ ಪರೀಕ್ಷೆಯ ರಿಸಲ್ಟ್ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಘಟನೆ ಬೆಳಕಿಗೆ ಬಂದಿದೆ.
ಚಿಕಿತ್ಸೆ ಫಲಿಸದೇ ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ನಿಧನ – Vishwanews24
