ಭಾರತ್‌ ಬಂದ್ : ಉಡುಪಿ/ದ. ಕ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ -Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಭಾರತ್‌ ಬಂದ್ : ಉಡುಪಿ/ದ. ಕ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ -Vishwanews24

ಮಂಗಳೂರು, /  ಉಡುಪಿ : ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲೆಯಲ್ಲಿ ಬಂದ್‌ಗೆ ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ರೈತ,ದಲಿತ,ಕಾರ್ಮಿಕ,ಜನಪರ ಚಳುವಳಿಗಳ ಒಕ್ಕೂಟದಿಂದ ಬಂದ್‌ಗೆ ಸಂಪೂರ್ಣ ಬೆಂಬಲ ದೊರೆತಿದೆ.

ಉಡುಪಿಯಲ್ಲಿ, ಈವರೆಗೆ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಬಸ್ಸುಗಳು, ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳು ಸಾಮಾನ್ಯವಾಗಿ ಚಲಿಸುತ್ತಿವೆ. ಸಿಟಿ, ಎಕ್ಸ್‌ಪ್ರೆಸ್, ಕೆಎಸ್‌ಆರ್‌ಟಿಸಿ ಮತ್ತು ಸರ್ವಿಸ್ ಬಸ್‌ಗಳು ಎಂದಿನಂತೆ ಸಂಚರಿಸುತ್ತಿವೆ. ಆದರೂ ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚುವರಿ ಸಿಬ್ಬಂದಿಗಳೊಂದಿಗೆ ಬಲಪಡಿಸಲಾಗಿದೆ. ಸಂಜೆ, ಸಮಾನ ಮನಸ್ಕ ಸಂಸ್ಥೆಗಳು ಪ್ರತಿಭಟನೆಯನ್ನು ನಡೆಸಲಿದೆ.

ನಗರದಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಎಂದಿನಂತೆ ಅಟೋಗಳು ಸಂಚರಿಸುತ್ತಿದ್ದು, ಪೊಲೀಸರು ನಗರದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಬಸ್ ನಿಲ್ದಾಣ ಸಮೀಪದ ಹೋಟೆಲ್, ಅಂಗಡಿಗಳು ತೆರೆದಿವೆ.