ಭೀಕರ ಅಪಘಾತ : ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಮುಂದಿದ್ದ ಲಾರಿಗೆ ಡಿಕ್ಕಿ ; ಒಂಬತ್ತು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -Vishwanews24
ಪುಣೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ಮುಂದಿದ್ದ ಟ್ರಕ್ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್ ವಸ್ತಿ ಗ್ರಾಮದ ಬಳಿ ಜು.20 ರ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ದತ್ತ ಗಣೇಶ್ ಯಾದವ್, ಜುಬೇರ್ ಅಜೀಜ್ ಮುಲಾನಿ,ನಿಖಿಲ್ ಚಂದ್ರಕಾಂತ್, ಅಕ್ಷಯ್ ಭರತ್ ವೈಕರ್, ವಿಶಾಲ್ ಸುಭಾಷ್ ಯಾದವ್, ಪರ್ವೇಜ್ ಅತ್ತರ್, ನೂರ್ ಮಹಮ್ಮದ್ ಅಬ್ಬಾಸ್ ದಯಾ, ಶುಭಂ ರಾಮ್ದಾಸ್ ಭಿಸೆ, ಅಕ್ಷಯ್ ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಪುಣೆಯ ಯಾವತ್ ಗ್ರಾಮದವರಾಗಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳು ಪುಣೆಯಿಂದ ರಾಯ್ಗಢ್ಗೆ ತೆರಳಿ ವಾಪಸ್ ಆಗುತ್ತಿದ್ದ ಸಂದರ್ಭ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 9 ವಿದ್ಯಾರ್ಥಿಗಳೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಬಳಿಕ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಕುರಿತು ಪುಣೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

