ಭೀಕರ ರಸ್ತೆ ಅಪಘಾತ ;ಕಾರುಗಳ ಮುಖಾಮುಖಿ ಡಿಕ್ಕಿ : 12 ಮಂದಿ ಸ್ಥಳದಲ್ಲೇ ಸಾವು -Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ತುಮಕೂರು: ಕಾರಿಗೆ ಇನ್ನೊಂದು ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಇಂದು  ಮುಂಜಾನೆ ನಡೆದಿದೆ.

ಬೆಳಗ್ಗೆ ನಾಲ್ಕು ಗಂಟೆಯ ವೇಳೆಗೆ ಬೆಂಗಳೂರು ಮೂಲದ ಮೂರು ಮಂದಿ ಯುವಕರಿದ್ದ ಬ್ರಿಜಾ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಈ ಕಾರು ಡಿವೈಡರ್ ದಾಟಿ ಮುಂದುಗಡೆ ಬರುತ್ತಿದ್ದ ಟವೇರಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬ್ರಿಜಾ ಕಾರಿನಲ್ಲಿದ್ದ 3 ಮಂದಿ ಮೃತಪಟ್ಟರೆ ಟವೇರಾದಲ್ಲಿದ್ದ 9 ಮಂದಿ ಮೃತಪಟ್ಟಿದ್ದಾರೆ.

ಕಾರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದು ಕುಣಿಗಲ್‌ ಸಮೀಪದ ಬ್ಯಾಲದಕೆರೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟವೇರಾಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದಾಗಿ ಟವೇರಾದಲ್ಲಿದ್ದ 10 ಜನರು ಹಾಗೂ ಕಾರಿನಲ್ಲಿದ್ದ 3 ಜನರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.

ಟವೇರಾದ ಪ್ರಯಾಣಿಕರಾದ ಮಂಜುನಾಥ್ (35), ತನುಜಾ (25), 8 ತಿಂಗಳ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳಾ (31), ಪ್ರಶನ್ಯಾ (14) ಕಾರಿನಲ್ಲಿದ್ದ ಲಕ್ಷ್ಮೀಕಾಂತ್ (24), ಸಂದೀಪ (35), ಮಧು (28) ಮೃತರೆಂದು ಪೊಲೀಸರು ತಿಳಿಸಿದ್ದಾರೆ.

ಟವೇರಾದಲ್ಲಿದ್ದ ಪ್ರಯಾಣಿಕರು ತಮಿಳುನಾಡಿನ ಹೊಸೂರಿನವರಾಗಿದ್ದು ಅವರೂ ಕೂಡಾ ಧರ್ಮಸ್ಥಳ ಪ್ರವಾಸ ಮುಗಿಸಿ ಹೊಸೂರಿಗೆ ವಾಪಸ್ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.