ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪದಲ್ಲಿ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್ ತಮ್ಮ ಟಿವಿಎಸ್ ಮೊಫೆಡ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಅಪಘಾತವಾದ ತಕ್ಷಣ ಅವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾವತೀಶ್ ಅವರು ರಸ್ತೆಯಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24
ಬಾವತೀಶ್ ಅವರು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದರು. ಅವರ ಅನಿರೀಕ್ಷಿತ ಸಾವು ಕುಟುಂಬಸ್ಥರು ಹಾಗೂ ಅಭಿಮಾನಿ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ
