ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ ; ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ : ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ – Vishwanews24
ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ.
ನಾನು ಅದೇ ಊರಿನಿಂದ ಬಂದವನು, ನನಗೆ ವಿಶೇಷವಾದ ನಂಬಿಕೆ ಇದೆ
ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧ ಚೇತನ್ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಚೇತನ್ ಹೇಳಿಕೆಗೆ ರಿಯಲ್ ಸ್ಟಾರ್ ಉಪೇಂದ್ರ ಕೂಡ ಪ್ರತಿಕ್ರಿಯೆ ನೀಡಿದ್ದಾರೆ
ಸಾಲು ಸಾಲು ಸಿನಿಮಾಗಳ ಶೂಟಿಂಗ್ನಲ್ಲಿ ಬ್ಯುಸಿಯಿರುವ ನಟ ಉಪೇಂದ್ರ ಇದೀಗ `ಕಾಂತಾರ’ ಚಿತ್ರದ ಬಗ್ಗೆ ಹಾಗೂ ನಟ ಚೇತನ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿಲ್ಲ. ಚಿತ್ರ ನೋಡಿ ರಿಯಾಕ್ಟ್ ಮಾಡ್ತೀನಿ. ಎಲ್ಲರೂ ಸಿನಿಮಾದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ.
ನಿನ್ನೆ ಘಟನೆಯ ಬಗ್ಗೆ ನಾನು ಏನೂ ಹೇಳಲ್ಲ. ಈ ತರದ ಬೆಳವಣಿಗೆ ಅಸಹ್ಯ ಅನಿಸುತ್ತಿದೆ. ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ. ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ. ನಾನು ಅದೇ ಊರಿನಿಂದ ಬಂದವನು, ನನಗೆ ವಿಶೇಷವಾದ ನಂಬಿಕೆ ಇದೆ ಜೊತೆಗೆ ನನ್ನ ತಂದೆ ಇವತ್ತಿಗೂ ನಾಗಾರಾದನೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ ಎಂದು ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ ಮಾಡಿದ್ದಾರೆ.
