ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ – vishwanews24

Featured, ದಕ್ಷಿಣ ಕನ್ನಡ

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್

ಮಂಗಳೂರು: ಮಂಗಳೂರನ್ನು ರಾಜ್ಯದ ಎರಡನೆ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅವರು ಶನಿವಾರ ನಗರದ ವೆಲೆನ್ಸಿಯಾ ವೃತ್ತದ ಬಳಿ ವೆಲೆನ್ಸಿಯಾ -ನಾಗನಕಟ್ಟೆ ರಸ್ತೆ ಕಾಂಕ್ರಿಟ್, ಸೇರಿದಂತೆ 3.47 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು.

ಸುಸಜ್ಜಿತ ರಸ್ತೆ ಕಾಮಗಾರಿಯನ್ನು ಕ್ಲಪ್ತ ಸಮಯದಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದರು.

ಇದನ್ನೂ ಓದಿ :

ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ – vishwanews24

ಸ್ವಾಗತಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆಲೆನ್ಸಿಯಾ ಪ್ರದೇಶದ ಜನರ ಬಹುದಿನದ ಬೇಡಿಕೆಯ ಪ್ರಕಾರ ಕಾಂಕ್ರಿಟ್ ರಸ್ತೆ ಯೋಜನೆ ಮಂಜೂರಾಗಿದೆ ಎಂದರು

ವೆಲೆನ್ಸಿಯಾ ಚರ್ಚ್ ನ ಸಹಾಯಕ ಧರ್ಮಗುರು ಫಾ.ಪ್ರದೀಪ್ ಶಿಲಾನ್ಯಾಸದ ಧಾರ್ಮಿಕ ವಿಧಿ ನೆರವೇರಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೊ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದ.ಕ. ಜಿಲ್ಲಾಧಿಕಾರಿ ದರ್ಶನ್, ಮನಪಾ ಆಯುಕ್ತ ರವಿಚಂದ್ರ ನಾಯಕ್, ಮಾಜಿ ಮೇಯರ್ ಗಳಾದ ಹರಿನಾಥ್, ಶಶಿಧರ ಹೆಗ್ಡೆ, ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಆರ್.ಪದ್ಮರಾಜ್, ಶಾಹುಲ್ ಹಮೀದ್, ಮನಪಾ ಮಾಜಿ ಸದಸ್ಯ ನವೀನ್ ಡಿಸೋಜ, ಅನಿಲ್, ಪ್ರವೀಣ್ ಚಂದ್ರ ಆಳ್ವ, ವಿಶ್ವಾಸ್ ದಾಸ್, ಅಬ್ದುಲ್ ರವೂಫ್, ಲೂಯಿ ಪಿಂಟೋ, ರೊನಾಲ್ಡ್, ಅನಿಲ್ ಲೋಬೊ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ – vishwanews24

Leave a Reply