ಮಂಗಳೂರಿಗೆ ಆಗಮಿಸಿದ ದಲಾಯಿಲಾಮ ಅವರಿಗೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅದ್ಧೂರಿ ಸ್ವಾಗತ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು‌.

ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ  ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.

ನಗರದ ಖಾಸಗಿ ಹೋಟೆಲ್​ನಲ್ಲಿ ಅವರು ತಂಗಿದ್ದು, ಅದರ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮೂರು ದಿನ ಮಂಗಳೂರುನಲ್ಲೇ ತಂಗಲಿರುವ ದಲೈಲಾಮಾ ಆ.30 ರಂದು ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೋಲಿಕ್​ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಬೆಂಗಳೂರಿಗೆ ತೆರಳುವರು.