ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಲೋಕಸಭೆ ಚುನಾವಣಾ ಪ್ರಯುಕ್ತ ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪರಾಹ್ನ 2.45 ಕ್ಕೆ ಮಧುರೈ ಯಿಂದ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 4.00ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಮತ್ತಿತ್ತರು ಸ್ವಾಗತಿಸಿದರು.

ಅಲ್ಲಿಂದ ಬಿಗಿ ಭದ್ರತೆಯೊಂದಿಗೆ ಝೀರೋ ಟ್ರಾಫಿಕ್ ಮೂಲಕ ರಸ್ತೆ ಮಾರ್ಗವಾಗಿ ನೇರವಾಗಿ ಕೇಂದ್ರ ಮೈದಾನಕ್ಕೆ ತೆರಳಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.