ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ – vishwanews24
ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ
ಬೆಂಗಳೂರು: ‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು’ ಎಂದು ವಿ ಸುನೀಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು: ಇದೇ ಬರುವ ಸೆಪ್ಟೆಂಬರ್ 18ರಂದು ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಗೆ ದಿನ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಅಭಿವೃದ್ಧಿಯ ಬಗ್ಗೆ ಬೇಡಿಕೆಗಳು ಗರಿಗೆದರಿವೆ.
ಪುತ್ತೂರು : ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳ್ಳತನ ಪ್ರಕರಣ; ಆರೋಪಿ ಬಂಧನ – vishwanews24
ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಬಗ್ಗೆ ಉಲ್ಲೇಖಿಸಿ ಪೋಸ್ಟ್ ಮಾಡಿರುವ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು ಎಂದು ಆಗ್ರಹಿಸಿದ್ದಾರೆ.
ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ಗೆ KSRTC ಡಿಕ್ಕಿ ; ಬಸ್ ಚಾಲಕ ಸ್ಥಳದಲ್ಲೇ ಸಾವು – vishwanews24
ಈ ಸಂಬಂಧ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ ವಿ ಸುನೀಲ್ ಕುಮಾರ್, ‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು ಎಂದು ನಾನು ಆಗ್ರಹಿಸುತ್ತೇನೆ’ ಎಂದು ಹೇಳಿದ್ದಾರೆ.
