ಮಂಗಳೂರಿನಲ್ಲಿ ಭೀಕರ ಅಪಘಾತ ; ಬಸ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ದಾರುಣ ಸಾವು
ಮಂಗಳೂರು,: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಪಾದಚಾರಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ.
ಕೂಳೂರು ನಿವಾಸಿ ಭೋಜ (45) ಮೃತರು ಎಂದು ಗುರುತಿಸಲಾಗಿದೆ.
ಅವರು ನಗರದಲ್ಲಿ ಹಲವಾರು ವರ್ಷಗಳಿಂದ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತನ್ನ ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೂಳೂರಿನಲ್ಲಿ ಪಾದಚಾರಿ ಮೇಲೆ ಹರಿದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಬೋಜ ಬಸ್ ನಡಿಗೆ ಎಸೆಯಲ್ಪಟ್ಟಿದ್ದು, ಅವರ ದೇಹ ಛಿದ್ರಗೊಂಡಿದೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
