ಮಂಗಳೂರಿನಲ್ಲಿ ಮೊದಲ ಕೊರೊನಾ ಪ್ರಕರಣ ದೃಢ : vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮಂಗಳೂರಿನಲ್ಲಿ ಮೊದಲ ಕೊರೊನಾ ಪ್ರಕರಣ ದೃಢಪಟ್ಟಿದೆ.ಸೋಂಕಿತ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಮಾರ್ಚ್ 19ರಂದು ದುಬಾಯಿಯಿಂದ ಬಂದ ವಿಮಾನದಲ್ಲಿದ್ದ 22 ವರ್ಷದ ಯುವಕನಲ್ಲಿ ಕೋವಿಡ್ 19 ಪ್ರಕರಣ ದೃಢಪಟ್ಟ ವರದಿ ಲಭಿಸಿದೆ.

ದುಬಾಯಿಯಿಂದ ಮಾರ್ಚ್ 19ರಂದು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ 22 ವರ್ಷದ ಭಟ್ಕಳ ಮೂಲದ ಯುವಕನನ್ನು ಅಂದು ತಪಾಸಣೆ ನಡೆಸಿ ಆತನ ಗಂಟಲ ಸ್ರಾವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮತ್ತು ಆ ದಿನವೇ ಈತನನ್ನು ನಗರದ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿತ್ತು.

ಆ ಪರೀಕ್ಷೆಯ ವರದಿ ಇಂದು ಲಭ್ಯವಾಗಿದ್ದು ಪಾಸಿಟಿವ್ ಎಂದು ವರದಿ ಬಂದಿದೆ ಮತ್ತು ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆಯಾದಂತಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದೀಗ ಈ ಯುವಕನ ವರದಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಈ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂಬ ಮಾಹಿತಿಯನ್ನೂ ಜಿಲ್ಲಾಧಿಕಾರಿಯವರು ಈ ಸಂದರ್ಭದಲ್ಲಿ ನೀಡಿದ್ದಾರೆ.