ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24
ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ
ಬೆಂಗಳೂರು/ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗಳಿಗೆ ಸರ್ಕಾರದಿಂದ ಮಹತ್ವದ ಸ್ಪಂದನೆ ಸಿಗುವ ನಿರೀಕ್ಷೆ ಗರಿಗೆದರಿದೆ.
ಇಂದಿನ ಕ್ಯಾಬಿನೆಟ್ ಸಭೆಯ ಅಜೆಂಡಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ 16 ಪ್ರಮುಖ ವಿಚಾರಗಳು ಸ್ಥಾನ ಪಡೆದುಕೊಂಡಿದ್ದು, ವಿಸ್ತೃತ ಚರ್ಚೆ ನಡೆಯಲಿದೆ.
ಕರಾವಳಿ ಭಾಗದ ಆರ್ಥಿಕ, ಸಾಮಾಜಿಕ ಹಾಗೂ ಕೈಗಾರಿಕಾ ಪ್ರಗತಿಗೆ ವೇಗ ನೀಡಲು ಸರ್ಕಾರವು ಮಹತ್ವಾಕಾಂಕ್ಷೆಯ ಸಮಗ್ರ ಅಭಿವೃದ್ಧಿ ‘ಬ್ಲೂ ಪ್ರಿಂಟ್’ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಜಿಲ್ಲೆಯ ಮೂಲಸೌಕರ್ಯ, ಬಂದರು ವಿಸ್ತರಣೆ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ವಲಯಕ್ಕೆ ಸಂಬಂಧಿಸಿದ ಪ್ರಮುಖ ಪ್ರಸ್ತಾವನೆಗಳಿಗೆ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಗುವ ನಿರೀಕ್ಷೆಯಿದೆ.
