ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ

ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 74,000 ರೂಪಾಯಿ ದಂಡ ವಿಧಿಸಿದೆ.

ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲ್ಯಾನ್ (28) ಮತ್ತು ಅಬ್ದುಲ್ ರಿಯಾಝ್ (40) ಶಿಕ್ಷೆಗೆ ಗುರಿಯಾದ ಅಪರಾಧಿಗಳು.

ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ರಾಜೀನಾಮೆ – vishwanews24

ನವೆಂಬರ್ 18, 2018 ರಂದು ಯುವತಿಯೊಬ್ಬರು ತನ್ನ ಸ್ನೇಹಿತನೊಂದಿಗೆ ಬೀಚ್ ಗೆ ತೆರಳಿದ್ದಾಗ ಈ ದಾರುಣ ಘಟನೆ ನಡೆದಿತ್ತು. ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ಏಳು ಜನರ ಗುಂಪು ಅವರನ್ನು ತಡೆದು, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿತ್ತು. ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಕಲಾವತಿ ಕೆ ಮತ್ತು ಅಂದಿನ ಎಸಿಪಿ ಮಂಜುನಾಥ್ ಶೆಟ್ಟಿ ಅವರು ಈ ಪ್ರಕರಣದ ಕುರಿತು ತನಿಖೆ ನಡೆಸಿದ್ದರು. ಬಳಿಕ ಅಂದಿನ ಎಸಿಪಿ ಶ್ರೀನಿವಾಸ ಗೌಡ ಆರ್ ಅವರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಧೀಶರಾದ ಜಗದೀಶ ವಿ.ಎನ್., ಆರೋಪಗಳೆಲ್ಲವೂ ಸಾಬೀತಾಗಿವೆ ಎಂದು ತೀರ್ಮಾನಿಸಿದರು. ಇದರ ಆಧಾರದ ಮೇಲೆ ನ್ಯಾಯಾಲಯವು ನಾಲ್ವರು ವಯಸ್ಕ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ – vishwanews24

ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ಸಾಕ್ಷಿಗಳನ್ನು ವಿಚಾರಣೆ ನಡೆಸಿ, ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಈ ಕೃತ್ಯದಲ್ಲಿ ಭಾಗಿಯಾದ ಮೂವರು ಅಪ್ರಾಪ್ತ ಬಾಲಕರ ವಿಚಾರಣೆಯು ಪ್ರಸ್ತುತ ಬಾಲ ನ್ಯಾಯ ಮಂಡಳಿಯಲ್ಲಿ ಮುಂದುವರಿದಿದೆ.

Leave a Reply