ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ ತಡೆದ ಭಜರಂಗದಳ ಕಾರ್ಯಕರ್ತರು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ:  ವಾಹನ ತಡೆದು ಪೊಲೀಸರಿಗೊಪ್ಪಿಸಿದ  ಭಜರಂಗದಳ ಕಾರ್ಯಕರ್ತರು 

ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಸೋಮವಾರ(ಮಾ.10) ನಡೆದಿದೆ.

ಬಳಿ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇದಾದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಅಪರೂಪದ ಭೇಟಿಯಿಂದ ಉಡುಪಿ ಜನರಲ್ಲಿ ಅಸಮಾಧಾನ  – vishwanews24

ಘಟನೆ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾಹನದಲ್ಲಿ ಸುಮಾರು 100 ಕೆ.ಜಿಗೂ ಅಧಿಕ ಗೋ ಮಾಂಸ ಇರುವುದು ಕಂಡುಬಂದಿದ್ದು, ಗೋಮಾಂಸ ಹಾಗೂ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ

Leave a Reply