ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

ಮಂಗಳೂರು: ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಆಪ್ತ ಸ್ನೇಹಿತರು ದೂರು ನೀಡಿದ ಹಿನ್ನೆಲೆಯಲ್ಲಿ, ಸುಮಾರು ಎರಡು ತಿಂಗಳ ಬಳಿಕ ಅವರ ಶವವನ್ನು ಸಮಾಧಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ ಅವರು 2026ರ ಜುಲೈ 19ರಂದು ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ದೇರೆಬೈಲ್ ಚರ್ಚ್‌ನ ದಫನ ಭೂಮಿಯಲ್ಲಿ ನೆರವೇರಿಸಲಾಗಿತ್ತು. ಅವರೊಂದಿಗೆ ವಾಸಿಸುತ್ತಿದ್ದ ಮಗಳು ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ – vishwanews24

ಆಲ್ಬರ್ಟ್ ಅವರ ಸಾವಿನ ಸುತ್ತ ಅನುಮಾನ ವ್ಯಕ್ತಪಡಿಸಿದ ಆಪ್ತ ಸ್ನೇಹಿತರು ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರುತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಸತ್ಯಾಸತ್ಯತೆಯನ್ನು ಪತ್ತೆಹಚ್ಚುವ ಉದ್ದೇಶದಿಂದ ತಹಸೀಲ್ದಾರ್ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ಸಮ್ಮುಖದಲ್ಲಿ ದೇರೆಬೈಲ್ ಚರ್ಚ್‌ನ ದಫನ ಭೂಮಿಯಿಂದ ಆಲ್ಬರ್ಟ್ ಅವರ ಶವವನ್ನು ಹೊರತೆಗೆಯಲಾಗಿದೆ. ಬಳಿಕ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ – vishwanews24

ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪರೀಕ್ಷೆಯ ವರದಿಗಳು ಬಂದ ಬಳಿಕ ಆಲ್ಬರ್ಟ್ ಅವರ ಸಾವಿಗೆ ನಿಖರ ಕಾರಣ ತಿಳಿದುಬರುವ ನಿರೀಕ್ಷೆಯಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

 

Leave a Reply