ಮಂಗಳೂರು:  ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:  ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮಂಗಳೂರು:  ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಬೀಬಿ ಅಲಾಬಿ ರಸ್ತೆಯ ಸರಕಾರಿ ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತರನ್ನು ನಿತೇಶ್ ರಾವ್ ಎಂದು ಗುರುತಿಸಲಾಗಿದೆ.ಉಡುಪಿ ಜಿಲ್ಲೆಯವರಾದ ಇವರು ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿಓದುತ್ತಿದ್ದರು. ಅವರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು ಐದು ವರ್ಷಗಳ ಹಿಂದೆ ನಿಧನರಾದರು.

ಆತನ ತಾಯಿ ನೀಡಿದ ದೂರಿನ ಮೇರೆಗೆ ಉತ್ತರ ಪಿಎಸ್ ನಲ್ಲಿ ಯುಡಿಆರ್ ನಂ 18/2024 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಗಳು ನಡೆಯುತ್ತಿದೆ.

Leave a Reply