ಮಂಗಳೂರು: ಈ ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ಅತ್ಯಾಚಾರಕ್ಕೆ ಸಮ : ಆರಗ ಜ್ಞಾನೇಂದ್ರ – Vishwanews24
ಮಂಗಳೂರು: ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ಅತ್ಯಾಚಾರಕ್ಕೆ ಸಮ : ಆರಗ ಜ್ಞಾನೇಂದ್ರ
ಮಂಗಳೂರು: ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಂದರ್ಭ ಈ ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದ ಅತ್ಯಾಚಾರಕ್ಕೆ ಸಮನಾಗಿದ್ದು, ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಕಾನೂನನ್ನು ಹತ್ತಿಕ್ಕುವ ಅವರ ನಿರ್ಧಾರ ಸೊಕ್ಕಿನ ತೀರ್ಮಾನವಾಗಿತ್ತು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರು ದಕ್ಷಿಣ ಮಂಡಲ ಬಿಜೆಪಿ ವತಿಯಿಂದ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಸೋಮವಾರ ನಡೆದ ತುರ್ತು ಪರಿಸ್ಥಿತಿಯ ಹೋರಾಟಗಾರರರಿಗೆ ಸನ್ಮಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಡಳಿತದ 8 ವರ್ಷಗಳ ಆಡಳಿತ ಹಿನ್ನೆಲೆಯಲ್ಲಿ ಸಾಧಕರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಇಂದಿರಾಗಾಂಧಿ ಅವರು ಸಂವಿಧಾನಕ್ಕಿಂತ, ಪ್ರಜಾಪ್ರಭುತ್ವಕ್ಕಿಂತ ಅತೀತಳು ಎಂದು ಅಂದುಕೊಂಡು ತುರ್ತು ಪರಿಸ್ಥಿತಿ ಹೇರಿದ್ದು ಈ ದೇಶದ ಘೋರ ದುರಂತಗಳಲ್ಲಿ ಒಂದು. ಅಂದು ದೇಶದ ಮೂಲೆ ಮೂಲೆಗಳಲ್ಲಿ ಲಕ್ಷಾಂತರ ಮಂದಿ ಜನಸಂಘ, ಸಂಘ ಪರಿವಾರದ ಕಾರ್ಯಕರ್ತರನ್ನು ಧಮನಿಸುವ ಕೆಲಸ ನಡೆಯಿತು. ಆದರೆ ಬಳಿಕ ನಡೆದ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಸೋಲನುಭವಿಸಿದ ಸುದ್ದಿ ಕೇಳಿದ್ದು ನನ್ನ ಜೀವಮಾನದ ಅತೀ ಸಂತೋಷದ ಕ್ಷಣವಾಗಿತ್ತು ಎಂದು ಅವರು ಹೇಳಿದರು.
ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಜನ – Vishwanews24
ಪಕ್ಷಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ನೆನೆಸುವುದರ ಜತೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಬೇಕಿದೆ. ಈ ನಡುವೆ ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದ ಬಡ ಕುಟುಂಬದವರಿಗೆ ಪಿಂಚಣಿ ವ್ಯವಸ್ಥೆ ಮಾಡಿಸಿಕೊಡುವ ಬಗ್ಗೆಯೂ ನಾವು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.
ಶಾಸಕ ಡಿ.ವೇದವ್ಯಾಸ್ ಕಾಮತ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಎಂಎಲ್ಸಿ ಮೋನಪ್ಪ ಭಂಡಾರಿ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಜಿಲ್ಲಾಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ, ಕಸ್ತೂರಿ ಪಂಜ, ಮಹಿಳಾ ಮೋರ್ಚಾದ ಪ್ರಭಾ ಮಾಲಿನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜುಲೈ 1ರಿಂದ ನಗರದಲ್ಲಿ ಜನತಾ ಯಾತ್ರೆ ಪ್ರಾರಂಭ : .ಕುಮಾರಸ್ವಾಮಿ – Vishwanews24
