ಮಂಗಳೂರು : ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ : ನಳಿನ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ : ನಳಿನ್ 

ಮಂಗಳೂರು: ಚುನಾವಣೆ ಪ್ರಚಾರದ ವೇಳೇ ಕಾಂಗ್ರೆಸ್ ಪಕ್ಷ ನೀಡಿರುವ ಉಚಿತ ಗ್ಯಾರೆಂಟಿ‌ ಭರವಸೆಯನ್ನು ಇನ್ನೂ ಅದನ್ನು ಈಡೇರಿಸಿಲ್ಲ. ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ‌ ಅವರಿಗೆ ಈ‌ ಹಿಂದೆ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ‌ ಕೊಡಿಸಿತ್ತು.‌ ಇದೀಗ ಕಾಂಗ್ರೆಸ್ ಸರಕಾರದ ಅವರನ್ನು ಉದ್ಯೋಗದಿಂದ ಬಿಡುಗಡೆ ಮಾಡಿದೆ.‌ ಕಾಂಗ್ರೆಸ್ ಈ ರೀತಿಯ ದ್ವೇಷ ಸಾಧಿಸದೆ ಅವರಿಗೆ ಮತ್ತೆ ಕೆಲಸ ನೀಡಬೇಕು. ಒಂದು ವೇಳೆ ಕೆಲಸ ನೀಡದಿದ್ದರೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳನ್ನು ಕೆಲಸ ಕೊಡಿಸುತ್ತೇವೆ ಎಂದರು.

ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು : ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ – Vishwanews24

ಇನ್ನು ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಅನ್ನೂ ತನಿಖೆ ಮಾಡಲಿ ಎಂದಿದ್ದಾರೆ.

Leave a Reply