ಮಂಗಳೂರು : ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ

ಮಂಗಳೂರು: ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ.

ಬಜಪೆ ಪರಿಸರದಲ್ಲಿ ವ್ಯಾಪಕವಾಗಿದ್ದು, ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ, ಶಾಲೆ, ಆಸ್ಪತ್ರೆ, ಮಾರ್ಕೆಟ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ತೆರಳುವ ಕಾಯಿಲೆ ಇದ್ದವರಿಂದ ಇತರರಿಗೂ ಹಬ್ಬುತ್ತಿದೆ.

ಕರಾವಳಿಯಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ : ವೈದ್ಯರಿಂದ ಎಚ್ಚರಿಕೆ | ನಮ್ಮ ಬಂಟ್ವಾಳಇನ್ನು ಮಿದುಳು ಜ್ವರ ಲಸಿಕೆಯ ಸರ್ವೇಗೆಂದು ಮನೆ ಮನೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಲ್ಲಿಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಕೆಂಗಣ್ಣು ಕಾಯಿಲೆ ಇರುವ ತಾಯಿ-ಮಕ್ಕಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಾಪಾಸ್ ಕಳುಹಿಸಲಾಗುತ್ತಿದ್ದು, ಒಂದು ವಾರ ಬಿಟ್ಟು ಬರುವಂತೆ ಹೇಳಲಾಗುತ್ತಿದೆ.

ಸುಬ್ರಹ್ಮಣ್ಯ,: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳು ನಟ ವಿಶಾಲ್ ಭೇಟಿ – Vishwanews24

 

Leave a Reply