ಮಂಗಳೂರು:  ಕರ್ನಾಟಕ ಬಂದ್- ನಾಳೆ ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು:  ಕರ್ನಾಟಕ ಬಂದ್- ನಾಳೆ ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಮಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಸೆ. 29ರಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

ಕನ್ನಡ ಪರ ಮತ್ತು ರೈತ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಬೆಂಬಲ ವ್ಯಕ್ತವಾಗದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯಾಚರಿಸಲಿದೆ ಎನ್ನಲಾಗಿದೆ.

Leave a Reply