ಮಂಗಳೂರು : ಕಾರಿನಲ್ಲಿ ಗಾಂಜಾ ಸಾಗಾಟ ; ಆರೋಪಿಗಳ ಬಂಧನ – vishwanews24
ಮಂಗಳೂರು : ಕಾರಿನಲ್ಲಿ ಗಾಂಜಾ ಸಾಗಾಟ ; ಆರೋಪಿಗಳ ಬಂಧನ
ಮಂಗಳೂರು : ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಆರೋಪಿಗಳು ಮೇಲ್ಕಾರ್ – ಸಜೀಪ -ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತರುತ್ತಿದ್ದಾರೆಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ.
ಇದನ್ನೂ ಓದಿ 👇
ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಆಯ್ಕೆ – vishwanews24
ಈ ಸಂದರ್ಭದಲ್ಲಿ ಆರೋಪಿಗಳು ಪರಾರಿಗೆ ಯತ್ನಿಸಿದಾಗ ಅವರನ್ನು ವಶಕ್ಕೆ ಪಡೆದ ಪೊಲೀಸರು ಅವರ ಬಳಿ ಇದ್ದ ಸುಮಾರು 80 ಕೆಜಿ ಗಾಂಜಾ ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು, 3 ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
