ಮಂಗಳೂರು: ಕಾರ್ಯಕ್ರಮಗಳಲ್ಲಿ ಹಾರ, ಹೂಗುಚ್ಛದ ಬದಲು ಪುಸ್ತಕ ನೀಡಿ : ನೂತನ ಡಿಸಿ ಮುಲ್ಲೈ ಮುಗಿಲನ್ – Vishwanews24
ಮಂಗಳೂರು: ಕಾರ್ಯಕ್ರಮಗಳಲ್ಲಿ ಹಾರ, ಹೂಗುಚ್ಛದ ಬದಲು ಪುಸ್ತಕ ನೀಡಿ : ನೂತನ ಡಿಸಿ ಮುಲ್ಲೈ ಮುಗಿಲನ್
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಮುಲ್ಲೈ ಮುಗಿಲನ್ ನಮಗೆ ಕಾರ್ಯಕ್ರಮಗಳಲ್ಲಿ ಸ್ವಾಗತದ ವೇಳೆ ನೀಡುವ ಹೂಗುಚ್ಚ ಬದಲಿಗೆ ಪುಸ್ತಕ ನೀಡುವಂತೆ ತಿಳಿಸಿದ್ದಾರೆ.
ಹೀಗಾಗಿ ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರನ್ನು ಅಧಿಕಾರಿಗಳು ಭೇಟಿ ಮಾಡುವ ಸಂದರ್ಭದಲ್ಲಿ ಹಾಗೂ ಜಿಲ್ಲಾಧಿಕಾರಿ ಭಾಗವಹಿಸುವ ಯಾವುದೇ ಸರಕಾರಿ, ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹೂಗುಚ್ಛ ನೀಡುವುದನ್ನು ನಿಷೇಧಿಸಲಾಗಿದೆ. ಹೂಗುಚ್ಛ ನೀಡುವ ಆಸಕ್ತಿ ಇರುವವರು ಅದರ ಬದಲಿಗೆ ಪುಸ್ತಕ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿರುವುದಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ – Vishwanews24
