ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ – ಯಾವ ತನಿಖೆಯನ್ನೂ ನಡೆಸದೇ ಶಾರಿಕ್ ನನ್ನು ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ದೀರಿ : ಡಿಕೆಶಿ – Vishwanews24
ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ-ಶಾರಿಕ್ ನನ್ನು ಯಾವ ತನಿಖೆಯನ್ನೂ ನಡೆಸದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ದೀರಿ : ಡಿಕೆಶಿ
ಬೆಂಗಳೂರು: ಮಂಗಳೂರು ನಗರದಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ನನ್ನು ಉಗ್ರ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಷ್ಟು ಸ್ಪೀಡ್ ಆಗಿ ಹೇಗೆ ಟ್ವೀಟ್ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ವೋಟರ್ ಐಡಿ ಹಗರಣದ ವಿಷಯನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಸರ್ಕಾರ ಆಟ ಆಡುತ್ತಿದೆ ಎಂದು ಸಿಟ್ಟು ಹೊರ ಹಾಕಿದರು.

