ಮಂಗಳೂರು ಗೋಲಿಬಾರ್ ಪ್ರಕರಣ : ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಬಿಎಸ್ ವೈ -Vishwanews24
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಮಂಗಳೂರು ನಡೆದ ಗೋಲಿಬಾರ್ನಿಂದ ಇಬ್ಬರು ಮೃತಪಟ್ಟ ಪ್ರಕರಣದ ಕುರಿತು ತನಿಖೆ ನಡೆಸಲು ನಾವು ಸಿಐಡಿಗೆ ಒಪ್ಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ಇದರಿಂದ ಮುಸಲ್ಮಾನರಿಗೆ ಯಾವ ರೀತಿ ತೊಂದರೆ ಆಗುತ್ತದೆ ಎಂದು ಹೇಳಲು ತಯಾರಿಲ್ಲ. ದೇಶದ ಮುಸಲ್ಮಾನರಿಗೆ ಈ ಕಾಯ್ದೆಯಿಂದ ತೊಂದರೆ ಆಗುವುದಿಲ್ಲ ಎಂದು ಸ್ವತಃ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಆದರು ಕೂಡ ಉದ್ದೇಶ ಪೂರ್ವಕವಾಗಿ ಗೊಂದಲ ಉಂಟುಮಾಡುವ ಷಡ್ಯಂತ್ರ, ಪಿತೂರಿಯನ್ನು ಕಾಂಗ್ರೆಸ್ಸಿನವರು ಮಾಡುತ್ತಿದ್ದಾರೆ. ಇದನ್ನ ಜನ ಅರ್ಥ ಮಾಡಿಕೊಂಡಿದ್ದಾರೆ, ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.
