ಮಂಗಳೂರು: ಡಿಕೆಶಿ ಬಂಧನ ವಿರೋಧಿಸಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಪ್ರತಿಭಟನೆ : ಹಲವಾರು ಕಾಂಗ್ರೇಸ್ ನಾಯಕರು ಪೊಲೀಸ್ ವಶಕ್ಕೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಈ ಸಂದರ್ಭ ರಸ್ತೆ ತಡೆ, ಪ್ರಧಾನಿ ಮೋದಿ ಹಾಗು ಅಮಿತ್ ಶಾ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿದ ಕಾರಣ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ರಮಾನಾಥ ರೈ ಹಾಗು ಐವನ್ ಡಿಸೋಜ ಸೇರಿ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯ ಸಂದರ್ಭ ಕಾಂಗ್ರೆಸ್ ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಏತನ್ಮಧ್ಯೆ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಪ್ರತಿಮೆಯನ್ನು ಸುಟ್ಟುಹಾಕಿ ಬಳಿಕ ರಸ್ತೆ ತಡೆಯಲು ಪ್ರಯತ್ನಿಸಿದಾಗ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ಬಂಧಿಸಿದರು.

ಈ ಸಂದರ್ಭ ಸಂಚಾರದಲ್ಲಿ ವ್ಯತ್ಯಯವಾಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಶಕುಂತಲಾ ಶೆಟ್ಟಿ, ಅಭಯಚಂದ್ರ ಜೈನ್ ಮತ್ತು ಇತರರು ಉಪಸ್ಥಿತರಿದ್ದರು.