ಮಂಗಳೂರು: ‘ದ.ಕ ಜಿಲ್ಲೆ ಲಾಕ್‌ಡೌನ್ ವಿಸ್ತರಣೆ ಕುರಿತು ಸಭೆ ನಡೆಸಿ ಅಂತಿಮ ನಿರ್ಧಾರ’ : ಸಚಿವ ಕೋಟ -Vishwanews24
ಮಂಗಳೂರು: ‘ದ.ಕ ಜಿಲ್ಲೆ ಲಾಕ್‌ಡೌನ್ ವಿಸ್ತರಣೆ ಕುರಿತು ಸಭೆ ನಡೆಸಿ ಅಂತಿಮ ನಿರ್ಧಾರ’ : ಸಚಿವ ಕೋಟ -Vishwanews24
ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ ನಂಬಬೇಡಿ..
ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ವಿಸ್ತರಣೆ ನಿರ್ಧಾರ ಅಂತಿಮವಾಗಿಲ್ಲ, ಜೂ.20ರಂದು ಸಭೆ ನಡೆಸಿ ಆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕುರಿತು ಮಾಹಿತಿ ನೀಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಕುರಿತು ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಜಿಲ್ಲಾಡಳಿತ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ಜೂನ್ 20ರಂದು ಸಭೆ ನಡೆಸಿ ಆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.
ಇನ್ನು ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ ನಂಬಬೇಡಿ ಎಂದು ಮಾಹಿತಿ ನೀಡಿದ್ದಾರೆ.
