ಮಂಗಳೂರು: ದೊರೆತ ಸ್ಥಾನಕ್ಕೆ ಉತ್ತಮವಾಗಿ ಕೆಲಸ ಮಾಡಿ ತಕ್ಕ ನ್ಯಾಯ ಒದಗಿಸುವೆ : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ದೊರೆತ ಸ್ಥಾನಕ್ಕೆ ಉತ್ತಮವಾಗಿ ಕೆಲಸ ಮಾಡಿ ತಕ್ಕ ನ್ಯಾಯ ಒದಗಿಸುವೆ : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ

ಮಂಗಳೂರು: ದೊರೆತ ಸ್ಥಾನಕ್ಕೆ ಉತ್ತಮವಾಗಿ ಕೆಲಸ ಮಾಡಿ ತಕ್ಕ ನ್ಯಾಯ ಒದಗಿಸುವ ಯತ್ನ ಮಾಡುವುದಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರು ತಿಳಿಸಿದರು.

ಅವರು ನಗರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಕಾಸರಗೋಡು: ಕುಂದಾಪುರ ರೈಲ್ವೇ ಹಳಿಯಲ್ಲಿ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಪತ್ತೆ – Vishwanews24

ಸರ್ಕಾರ ನನ್ನ ಮೇಲೆ ನಂಬಿಕೆಯಿರಿಸಿ ದೊಡ್ಡ ಜವಾಬ್ದಾರಿ ನೀಡಿದೆ, ಅದಕ್ಕೆ ಸಂತಸವಿದ್ದು, ಹುದ್ದೆಯ ಸ್ಥಾನಕ್ಕೆ ತಕ್ಕ ನ್ಯಾಯ ದೊರಕಿಸಲು ನಾನು ಶ್ರಮಿಸುತ್ತೇನೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಮಟ್ಟಾರು ರತ್ನಾಕರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಮೂರು ಜಿಲ್ಲೆಗಳಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಿದೆ, ಜನ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಅವುಗಳನ್ನು ಪೂರ್ಣಗೊಳಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡರಾದ ಸಂತೋμï ಬೋಳಿಯಾರ್, ಪುತ್ತೂರು ನಗರ ಸಭಾ ಅಧ್ಯಕ್ಷೆ ಇಂದಿರಾ .ಎಸ್., ಉಪಾಧ್ಯಕ್ಷೆ ಪರಮೇಶ್ವರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ಸೋಜ ಹಾಗೂ ಇತರೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಡಿಕ್ಕಿ.. 4 ವರ್ಷ ಪ್ರಾಯದ ಬಾಲಕ ಸಾವು – Vishwanews24

Leave a Reply