ಮಂಗಳೂರು: ನ.8ರಂದು ಹರೇಕಳ ಹಾಜಬ್ಬಗೆ ಪ್ರದ್ಮಶ್ರೀ ಪ್ರಶಸ್ತಿ ಪ್ರದಾನ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ನ.8ರಂದು ಹರೇಕಳ ಹಾಜಬ್ಬಗೆ ಪ್ರದ್ಮಶ್ರೀ ಪ್ರಶಸ್ತಿ ಪ್ರದಾನ – Vishwanews24

ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ 2020ನೇ ಸಾಲಿನ ಪ್ರದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಂದ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ.

ನವದೆಹಲಿಗೆ ಆಗಮಿಸುವಂತೆ ಹರೇಕಳ ಹಾಜಬ್ಬಗೆ ಪತ್ರ ಬಂದಿದೆ. ಈ ಹಿನ್ನೆಲೆಯಲ್ಲಿ ತನ್ನ ಸಹಾಯಕ ಜೊತೆ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನವಂಬರ್ 8ರಂದು ದೆಹಲಿಗೆ ತಲುಪಿ ಅಲ್ಲಿನ ಅಶೋಕ್ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಈ ಹಿಂದೆ 2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿತ್ತು. ಮಾರ್ಚ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನವಾಗದೇಕಿತ್ತು. ಆದರೆ, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಬ ಮುಂದೂಡಲ್ಪಟ್ಟಿತ್ತು. ಇದೀಗ ನವಂಬರ್ ತಿಂಗಳಲ್ಲಿ ಪ್ರಶಸ್ತಿ ಪ್ರಧಾನಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.

ಕಾರ್ಕಳ: ನಂದಳಿಕೆ ಗ್ರಾಮದ ಗೋಳಿಕಟ್ಟೆಯಲ್ಲಿ ಕಲ್ಲಿನಲ್ಲಿ ಕೆತ್ತಲಾದ ಶಾಸನ ಪತ್ತೆ – Vishwanews24