ಮಂಗಳೂರು : ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ – ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತ – Vishwanews24
ಮಂಗಳೂರು : ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ – ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತ
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ.
ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಉಡುಪಿ: ಡ್ರಗ್ಸ್ ಸೇವನೆ ಆರೋಪ : 42 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಮಣಿಪಾಲದ ಮಾಹೆ ಆಡಳಿತ ಮಂಡಳಿ – Vishwanews24
