ಮಂಗಳೂರು ನದಿಯಲ್ಲಿ ಈಜಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು ನದಿಯಲ್ಲಿ ಈಜಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ಮೃತ್ಯು

ಮಂಗಳೂರು : ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ಮಂಗಳೂರು ನಗರದ ಕೋಡಿಕಲ್‌ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ನಾಲ್ವರ ಪೈಕಿ ಸುಮಿತ್ ಹಾಗೂ ಅನಿಶ್ ನದಿ ನೀರಿನ ಸುಳಿಗೆ ಸಿಲುಕಿ ನೀರುಪಾಲಾಗಿದ್ದಾರೆ.

ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು – vishwanews24

ಘಟನೆಯ ಮಾಹಿತಿ ತಿಳಿದ ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಅಗ್ನಿಶಾಮಕ ದಳದವರು ಬೆಳಕಿನ ವ್ಯವಸ್ಥೆಯೊಂದಿಗೆ ತಡರಾತ್ರಿಯವರೆಗೂ ಶೋಧ ಕಾರ್ಯ ನಡೆಸಿದ್ದು, ಸ್ಥಳಕ್ಕೆ ಮುಳುಗು ತಜ್ಞರು ಕೂಡ ಆಗಮಿಸಿದ್ದರು. ಜೊತೆಗೆ ಬಜಪೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಮತ್ತು ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು.

ಮೃತ ಸುಮಿತ್ ಕೊಟ್ಟಾರ ಚೌಕಿಯಲ್ಲಿನ ಗ್ಯಾರೇಜ್ ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಅನಿಶ್ ಸೋಡಾ ಫಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪಡುಬಿದ್ರಿಯ ಅಳಿಯನಾಗಿ ನನಗೆ ಪ್ರೀತಿ, ಸ್ನೇಹ ನೀಡಿದ್ದೀರಿ, ನಿಮ್ಮ ಅಭಿಮಾನಕ್ಕೆ ಚಿರ ಋಣಿ :ಬಂಜರ ಡಾ.ಕೆ.ಪ್ರಕಾಶ್ ಶೆಟ್ಟಿ – vishwanews24

Leave a Reply