ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ – Vishwanews24
ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ
ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್ ಬಳಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್‍ಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳ ತಂಡ ಬೈಕ್‍ನಲ್ಲಿ ವಿದ್ಯಾರ್ಥಿಗಳನ್ನು ಹಿಂಬಾಲಿಸಿತ್ತು. ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.
ಬೀಚ್‍ಗೆ 4 ಜನ ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ಸಹ ಸೋಮೇಶ್ವರ ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದ ವರದಿಯಾಗಿತ್ತು.
ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.
ಮಂಗಳೂರು : ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳು ಆಕ್ರೋಶ – Vishwanews24
