ಮಂಗಳೂರು : ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಗೌರವಾರ್ಪಣೆ – vishwanews24
ಮಂಗಳೂರು : ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಗೌರವಾರ್ಪಣೆ
ಮಂಗಳೂರು : ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.
ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು” ಎಂದರು.
ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.
