ಮಂಗಳೂರು : ಪಾಲಿಕೆ ಚುನಾವಣೆ ; ಈ ಬಾರಿ ಮತ್ತೆ ಕಾಂಗ್ರೆಸ್ಸನ್ನು ಆಯ್ಕೆ ಮಾಡಿ : ರಮಾನಾಥ ರೈ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಾಂಗ್ರೆಸ್ ಪಕ್ಷ 5 ಬಾರಿ ಮಂಗಳೂರು ನಗರ ಪಾಲಿಕೆಯಲ್ಲಿ ಅಧಿಕಾರವನ್ನು ಪಡೆದಿದೆ. ನಾವು ನೀಡಿದ ಭರವಸೆಯನ್ನು ಪಾಲಿಸಿದ್ದೇವೆ. ಸಿದ್ಧರಾಮಯ್ಯರ ಆಡಳಿತದಲ್ಲಿ ನೀಡಿದ ಭರವಸೆಯನ್ನು ಪೂರೈಸಿ ಪ್ರಗತಿ ಸಾಧಿಸಿದ್ದೇವೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನ ಕುಳಾಯಿಯಲ್ಲಿ ನಡೆದ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮಂಗಳೂರು ಮಹಾನಗರ ಪಾಲಿಕೆಯಲ್ಲಿ 5 ವರ್ಷ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದೆ. 5000 ಕೋಟಿಗಿಂತಲೂ ಮಿಕ್ಕಿ ಎರಡು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅನುದಾನ ನೀಡಿದೆ. ಈ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ನ್ನು ಗೆಲ್ಲಿಸಬೇಕೆಂದು ಜನ ಮೆಚ್ಚುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಈ ಬಾರಿ ಮತ್ತೆ ಕಾಂಗ್ರೆಸ್ಸನ್ನು ಆಯ್ಕೆ ಮಾಡಿ ಎಂದರು.