ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ..

ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ : ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಮನವಿ

ಮಂಗಳೂರು: ಸೈಬರ್​ ವಂಚಕರು ಮಂಗಳೂರು ಪೊಲೀಸ್ ಕಮಿಷನರ್  ​ಹೆಸರಿನಲ್ಲಿ ನಕಲಿ ಫೇಸ್​​​ಬುಕ್​​​​​​ ಖಾತೆ ತೆರೆದಿದ್ದಾರೆ. ಸೈಬರ್​ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್​ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್​ ಮುಖಾಂತ ಸಂದೇಶ ಕಳುಹಿಸಿ​ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು.

ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್​ ​ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ “ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರ  ವಿಧಾನಸಭೆ ಚುನಾವಣೆ : 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ – vishwanews24

Leave a Reply