ಮಂಗಳೂರು – ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : 7 ಮಂದಿ SDPI ಕಾರ್ಯಕರ್ತರು ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : 7 ಮಂದಿ SDPI ಕಾರ್ಯಕರ್ತರು ವಶಕ್ಕೆ

ಮಂಗಳೂರು: ಬಿಜೆಪಿ ಯುವಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಏಳು ಮಂದಿ ಎಸ್‍ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದು, ನಿನ್ನೆ ತಡರಾತ್ರಿ ಶಂಕಿತ ಆರೋಪದ ಹಿನ್ನೆಲೆ ಬೆಳ್ಳಾರೆ ಎಸ್‍ಡಿಪಿಐ ಕಾರ್ಯಕರ್ತರ ಮನೆಗೆ ನುಗ್ಗಿ ಏಳು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

ಪಡುಬಿದ್ರಿ :ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಹೆಜಮಾಡಿ ಯುವಕ ಯಾಸಿನ್‌ ಬಂಧನ – Vishwanews24

Leave a Reply