ಮಂಗಳೂರು ಭಾರೀ ಮಳೆ : ಏರ್ಪೋರ್ಟ್ ರನ್ ವೇ ಬಳಿ ರಸ್ತೆ ಕುಸಿತ – Vishwanews24
ಮಂಗಳೂರು ಭಾರೀ ಮಳೆ : ಏರ್ಪೋರ್ಟ್ ರನ್ ವೇ ಬಳಿ ರಸ್ತೆ ಕುಸಿತ
ಬಜ್ಪೆ: ಮಂಗಳೂರು ಏರ್ಪೋರ್ಟ್ ರನ್ ವೇ ಬದಿಯಲ್ಲಿಯೇ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಅದ್ಯಪಾಡಿ ಬಳಿ ಇರುವ ರನ್ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಆಗಿದೆ.
ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆ ಇದಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಈ ಕುರಿತು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದು, ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸುತ್ತುವರಿದ ರಸ್ತೆಯಲ್ಲಿ ಭೂ ಕುಸಿತವಾಗಿದ್ದು ವಿಮಾನದ ರನ್ ವೇಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ನಿಲ್ದಾಣದಲ್ಲಿ ಚಟುವಟಿಕೆಗಳು ದೈನಂದಿನಂತೆ ನಡೆಯುತ್ತಿದೆ ಎಂದಿದೆ.
ಇನ್ನು ಬಜ್ಪೆ ಏರ್ಪೋರ್ಟ್ ರನ್ ವೇ ಸಮೀಪದಲ್ಲಿಯೇ ಇರುವ ರಸ್ತೆ ಇದಾಗಿದೆ. ರನ್ ವೇನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮವಾಗಿ ರಸ್ತೆ ಕುಸಿದೆ ಎಂದು ಅದ್ಯಪಾಡಿಯ ಗ್ರಾಮಸ್ಥರು ಆರೋಪಿಸಿದ್ದಾರೆ.

