ಮಂಗಳೂರು : ಯಕ್ಷಗಾನದ ಭೀಷ್ಮ `ಬಲಿಪ ನಾರಾಯಣ ಭಾಗವತ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಯಕ್ಷಗಾನದ ಭೀಷ್ಮ `ಬಲಿಪ ನಾರಾಯಣ ಭಾಗವತ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಮಂಗಳೂರು : ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (85) ಗುರುವಾರ ರಾತ್ರಿ ದ‌.ಕ ಜಿಲ್ಲೆಯ ಮೂಡಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ‌ನಿಧನರಾಗಿದ್ದಾರೆ.

ಇವರ ಅಗಲಿಕೆಗೆ ಯಕ್ಷ ಲೋಕ ಮತ್ತು ಅಭಿಮಾನಿಗಳು, ಕುಟುಂಬಸ್ಥರು ಕಂಬನಿ ಮಿಡಿಯುತ್ತಿದ್ದಾರೆ.

ಯಕ್ಷರಂಗದ ಭೀಷ್ಮ ಬಲಿಪ ನಾರಾಯಣರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆಯವರು ಮೆಚ್ಚಿಕೊಳ್ಳಲಿದ್ದಾರೆ. ಅವರ ನಿಧನದಿಂದ ನಮಗೆ ತುಂಬಾ ನೋವು ಆಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮಂಗಳೂರು  : ನವಜಾತ ಶಿಶುವನ್ನು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಪೋಷಕರು – Vishwanews24

Leave a Reply