ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಯುವನಿಧಿ’ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಯುವಕ-ಯುವತಿಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಹಾಗೂ ಉತ್ತಮ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ‘ಯುವನಿಧಿ ಪ್ಲಸ್’ ಯೋಜನೆಯಡಿ ಉಚಿತ ಕೌಶಲ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ವತಿಯಿಂದ ಈ ವಿಶಿಷ್ಟ ತರಬೇತಿ ನಡೆಯುತ್ತಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತರಬೇತಿ ಕೇಂದ್ರಗಳಲ್ಲಿ ತರಬೇತಿ ತರಗತಿಗಳು ಆರಂಭವಾಗಲಿವೆ.

ಎಲ್ಲೆಲ್ಲಿ ನಡೆಯಲಿದೆ ಕೌಶಲ ತರಬೇತಿ?
ನಿರುದ್ಯೋಗಿ ಯುವಜನರಿಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರಮುಖ ಸರ್ಕಾರಿ ಹಾಗೂ ತಾಂತ್ರಿಕ ತರಬೇತಿ ಸಂಸ್ಥೆಗಳಲ್ಲಿ ಈ ತರಬೇತಿ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ತಮ್ಮ ಸಮೀಪದ ಕೆಳಗಿನ ಯಾವುದೇ ಕೇಂದ್ರಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು:

ಐಟಿಐ ಕದ್ರಿ, ಮಂಗಳೂರು
ಮಹಿಳಾ ಐಟಿಐ, ಮಂಗಳೂರು
ಕೆಜಿಟಿಟಿಐ ಕದ್ರಿ, ಮಂಗಳೂರು
ಜಿಟಿಟಿಸಿ ಬೈಕಂಪಾಡಿ, ಮಂಗಳೂರು
ಸರ್ಕಾರಿ ಐಟಿಐ, ಬೆಳ್ತಂಗಡಿ
ಸರ್ಕಾರಿ ಐಟಿಐ, ಪುತ್ತೂರು
ಸರ್ಕಾರಿ ಐಟಿಐ, ವಿಟ್ಲ

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

ಇದನ್ನೂ ಓದಿ: 

ತರಬೇತಿ ಪಡೆಯುವುದು ಹೇಗೆ?
ಪ್ರಸ್ತುತ ಸರ್ಕಾರದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಆಸಕ್ತ ಅಭ್ಯರ್ಥಿಗಳು ತಮಗೆ ಹಾಜರಾಗಲು ಅನುಕೂಲವಾಗುವ ದಿನಾಂಕ ಮತ್ತು ಸಮಯವನ್ನು ಗಮನಿಸಿ, ಹತ್ತಿರದ ತರಬೇತಿ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ತರಬೇತಿಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಅಭ್ಯರ್ಥಿಗಳಿಗೆ ಉಚಿತವಾಗಿ ನೈಪುಣ್ಯ ತರಬೇತಿ ನೀಡಲಾಗುತ್ತದೆ.

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಉಚಿತ ತರಬೇತಿಯ ಸದುಪಯೋಗ ಪಡೆದುಕೊಳ್ಳಿ:
ಕೇವಲ ನಿರುದ್ಯೋಗ ಭತ್ಯೆಗೆ ಸೀಮಿತವಾಗದೆ, ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ತಾಂತ್ರಿಕ ಹಾಗೂ ವೃತ್ತಿಪರ ಕೌಶಲಗಳನ್ನು ಕಲಿಯಲು ಇದು ಸುವರ್ಣಾವಕಾಶವಾಗಿದೆ. ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಅರ್ಹ ಯುವನಿಧಿ ಫಲಾನುಭವಿಗಳು ವಿಳಂಬ ಮಾಡದೆ ತಕ್ಷಣವೇ ತಮಗೆ ಹತ್ತಿರದ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಈ ಉಚಿತ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply