ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ; ಶಿಕ್ಷಕ ಪೊಲೀಸರ ವಶಕ್ಕೆ – Vishwanews24
ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ; ಶಿಕ್ಷಕ ಪೊಲೀಸರ ವಶಕ್ಕೆ
ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕ ವಿರಾಜ್ ಜೈನ್ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಾರ್ಚ್ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.
ಮಂಗಳೂರು: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆ – Vishwanews24
ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್ ಜೈನ್ ಕಳೆದ ವರ್ಷ ಜೂನ್ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.
