ಮಂಗಳೂರು: ವೆನ್‌ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ವೆನ್‌ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ

ಮಂಗಳೂರು: ನಗರದ ವೆನ್‌ ಲಾಕ್ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸರಕಾರ ಒಪ್ಪಿಗೆ ನೀಡಿದ್ದು, ಬಜೆಟ್‌ನಲ್ಲಿಯೂ ಅನುದಾನ ಮೀಸಲಿರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಆಸ್ಪತ್ರೆಗೆ ದಕ ಹಾಗೂ ಸುತ್ತಮುತ್ತಲಿನ ಹಲವು ಜಿಲ್ಲೆಗಳ ಜನರು ಚಿಕಿತ್ಸೆಗಾಗಿ ಬರುತ್ತಿದ್ದು, ಈ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿಸುವ ಮೂಲಕ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಅವಕಾಶ ನೀಡುವಂತೆ ಗುರುವಾರ ವಿಧಾನ ಪರಿಷತ್ ಅಧಿವೇಶನದಲ್ಲಿ ಗಮನ ಸೆಳೆದಿದ್ದೆ. ಈ ಬಗ್ಗೆ ಆರೋಗ್ಯ ಸಚಿವರು ಒಪ್ಪಿಗೆ ಸೂಚಿಸಿದ್ದರು ಎಂದು ಹೇಳಿದರು.

ಚಿನ್ನ ಕಳ್ಳ ಸಾಗಣೆ ಪ್ರಕರಣ : ನಟಿ ರನ್ಯಾ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲು – vishwanews24

 

ಬಜೆಟ್‌ನಲ್ಲಿ ದಾವಣಗೆರೆ ಹಾಗೂ ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗಳು, ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ದಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳ ನವೀಕರಣಕ್ಕೆ ಒಟ್ಟು 650 ಕೋಟಿ ರೂ. ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲಾಗಿದೆ. ಜಿಲ್ಲಾಸ್ಪತ್ರೆಯಾಗಿರುವ ವೆನ್‌ಲಾಕ್‌ಗೆ ಗರಿಷ್ಟ 250 ಕೋಟಿ ರೂ.ಗಳಾದರೂ ಬಿಡುಗಡೆಯಾಗುವ ಸಾಧ್ಯತೆ ಇದೆ. 15 ಜಿಲ್ಲೆಗಳ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ವೆನ್‌ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಯನ್ನು ಸ್ಪೆಷಲೈಸ್ಡ್ ಆಸ್ಪತ್ರೆಯಾಗಿ ಮಾರ್ಪಡಿಸಬೇಕಿದೆ. ವೆನ್‌ಲಾಕ್‌ನಲ್ಲಿ ದಿನಕ್ಕೆ 1500ರಿಂದ 1800ರವರೆಗೆ ಹೊರ ರೋಗಿಗಳಾಗಿ, ಸುಮಾರು 200ರಷ್ಟು ಒಳ ರೋಗಿಗಳಾಗಿ ದಾಖಲಾಗುತ್ತಾರೆ. ಕ್ಯಾನ್ಸರ್ ರೋಗ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆ ಮಾದರಿಯಲ್ಲಿ ವೆನ್‌ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕಾಗಿದೆ. ಇದರಿಂದ ಹೆಚ್ಚಿನ ಹಾಗೂ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯಲಿದ್ದು, ಇದು ಜಿಲ್ಲೆಗೆ ಬಹುದೊಡ್ಡ ಕೊಡುಗೆಯಾಗಲಿದೆ ಎಂದು ಐವನ್ ಡಿಸೋಜಾ ಸಂತಸ ವ್ಯಕ್ತಪಡಿಸಿದರು.

ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ , ಉತ್ತಮವಾದ ಬಜೆಟ್ : ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ಡಿಕೆಶಿ ಪ್ರತಿಕ್ರಿಯೆ – vishwanews24

Leave a Reply