ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ – Vishwanews24
ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ
ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24
ಅ. 13ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಮಂಗಳೂರಿನಿಂದ ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ. ರಾತ್ರಿ 11.15ರ ವೇಳೆಗೆ ಫರಂಗಿಪೇಟೆ ಬಳಿ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡಗಟ್ಟಿ ನಿಂದಿಸಿ ಬಳಿಕ ತಲವಾರು ಝಳಪಿಸಿದ್ದ. ಜೀವ ಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಿ ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಫಳ್ನೀರ್‌ನ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ.. ನೋಡಿ ಇಂದಿನ ದಿನ ಭವಿಷ್ಯ:- Vishwanews24
