ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿಡುವುದು ಖಚಿತ : ಶಾಸಕ ಭರತ್ ಶೆಟ್ಟಿ – Vishwanews24
ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿಡುವುದು ಖಚಿತ : ಶಾಸಕ ಭರತ್ ಶೆಟ್ಟಿ
ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನಿಡುವುದು ಖಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ಬುಧವಾರ ಹೇಳಿದ್ದಾರೆ.
ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ 5 ಕೋಟಿ ರೂ.ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುರತ್ಕಲ್ ವೃತ್ತಕ್ಕೆ ವೀರ್ ಸಾವರ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಲು ಪಾಲಿಕೆ ಮಟ್ಟದಲ್ಲಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಟೋಲ್ ಶುಲ್ಕವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಯುಪಿಎ ಸರ್ಕಾರದಲ್ಲಿ ಟೋಲ್ ತೆರಿಗೆಯನ್ನು ಯಾರು ಜಾರಿಗೆ ತಂದರು ಎಂಬುದು ಜನರಿಗೆ ತಿಳಿದಿದೆ ಎಂದಿದ್ದಾರೆ.
ಫೆಬ್ರವರಿಯಲ್ಲಿ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲಾಗುವುದು ಎಂಬ ವಿಶ್ವಾಸ ಟೋಲ್ ಗೇಟ್ ಪ್ರತಿಭಟನಾಕಾರರದ್ದು, ಆ ಉದ್ದೇಶಕ್ಕಾಗಿಯೇ ಪ್ರತಿಭಟನೆ ನಡೆಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಹಿಂದಿನ ಸರ್ಕಾರ ಹಾಕಿದ್ದ ಒಳಚರಂಡಿ ವ್ಯವಸ್ಥೆ ಮೂರು ತಿಂಗಳಲ್ಲೇ ಒಡೆದು ಹೋಗಿದೆ ಎಂದ ಅವರು, ಶಾಸಕರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದರು.
ಇನು ರೋಷನ್ ಬೇಗ್ ಅವರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಕೊಳಚೆ ನೀರು ನಿರ್ಮಾಣ ವಿಚಾರವಾಗಿ ಲೋಕಾಯುಕ್ತ ತನಿಖೆಗೆ ಆದೇಶಿಸಿದ್ದು, ಯಾರಿಗೆ ರಕ್ಷಣೆ ನೀಡಲಾಗಿದೆ ಎಂಬುದು ತಿಳಿಯಬೇಕಿದೆ ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
