ಮಂಗಳೂರು ಸೆಂಟ್ರಲ್- ತಿರುವನಂತಪುರಂ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಸೆಂಟ್ರಲ್- ತಿರುವನಂತಪುರಂ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು:ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು.

ಮಂಗಳೂರು-ತಿರುವನಂತಪುರಂ ನಡುವಿನ ವಂದೇ ಭಾರತ್ ರೈಲು ಬುಧವಾರ ಹೊರತು ಪಡಿಸಿ ವಾರ ಆರು ದಿನ ಸಂಚರಿಸಲಿದೆ. ಮಂಗಳೂರಿನಿಂದ ಬೆಳಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರು ತಲುಪಲಿದೆ.

ಕುಂದಾಪುರ : ಬಿ.ಎಂ.ಸುಕುಮಾರ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆ – Vishwanews24

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು.ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀ ನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲ್ಘಾಟ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಎಸ್. ಜಯಕೃಷ್ಣನ್, ಮನಪಾ ಸದಸ್ಯರು , ರೈಲ್ವೇ ಬಳಕೆದಾರರು, ಕೆಸಿಸಿಐ ಪ್ರತಿನಿಧಿಗಳು, ರೈಲ್ವೇ ಹೋರಾಟಗಾರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ : ಇನ್ನಿಬ್ಬರು ಪೊಲೀಸರ ವಶಕ್ಕೆ – Vishwanews24

Leave a Reply