ಮಂಗಳೂರು : ಸ್ವಾತಂತ್ರ್ಯೋತ್ಸವ ದಿನಾಚರಣೆ – ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಅವರಿಂದ ಧ್ವಜಾರೋಹಣ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ.

ನೆಹರೂ ಮೈದಾನದಲ್ಲಿ ನಡೆಯವ ಬೆಳಿಗ್ಗಿನ ಕಾರ್ಯಕ್ರಮಗಳು ಇಂತಿವೆ: ಬೆಳಿಗ್ಗೆ 8.45 ಗಂಟೆಗೆ ಸಮಾವೇಶ, 8.55 ಗಂಟೆಗೆ ಗಣ್ಯರ ಆಗಮನ, 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ರಾಷ್ಟ್ರ ಗೀತೆ(ಪೊಲೀಸ್ ಬ್ಯಾಂಡಿನಲ್ಲಿ), 9.05 ಗಂಟೆಗೆ ಸಚಿವರಿಂದ ಪೆರೇಡ್ ವೀಕ್ಷಣೆ, ಗೌರವ ಸ್ವೀಕಾರ, ನಾಡಗೀತೆ, 9.15 ಗಂಟೆಗೆ ಕೋವಿಡ್-19 ವಾರಿಯರ್ಸ್‍ಗಳಿಗೆ ಸನ್ಮಾನ ಕಾರ್ಯಕ್ರಮ, 9.20 ಗಂಟೆಗೆ ಸಚಿವರು ಸ್ವಾತಂತ್ರ್ಯೋತ್ಸವ ಕುರಿತು ಸಂದೇಶ ನೀಡಲಿದ್ದಾರೆ. 10 ಗಂಟೆಗೆ ಪಥ ಸಂಚಲನ ಹಾಗೂ ಪೆರೇಡ್ ವಿಸರ್ಜನೆ ನಡೆಯಲಿದೆ.

ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಹಾಜರಾಗುವವರು ಕಡ್ಡಾಯವಾಗಿ ಮುಖಗವಸು(ಮಾಸ್ಕ್) ಧರಿಸಬೇಕು ಹಾಗೂ ಸಾಮಾಜಿಕ ಅಂತರ ಪಾಲಿಸಬೇಕು.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ಕಾರ್ಯಕ್ರಮಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿದ್ದು, ಈ ಪ್ರಯುಕ್ತ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ನೇರ ಪ್ರಸಾರ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.