ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್

ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ ಅನುಭವ ನೀಡುವ ನೈಜ ಹೋಮ್ ಸ್ಟೇ ವ್ಯವಸ್ಥೆಯನ್ನು ಪ್ರೋತ್ಸಾಹಿಸಲಾಗುವುದು. ಆದರೆ ಹೋಂಸ್ಟೇ ಹೆಸರಿನಲ್ಲಿ ದೊಡ್ಡ ಪ್ರಮಾಣದ ವಾಣಿಜ್ಯ ಲಾಡ್ಜ್ ಅಥವಾ ಹೋಟೆಲ್ ಚಟುವಟಿಕೆ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಹೋಮ್ ಸ್ಟೇಯನ್ನು ಆರಂಭಿಸುವವರು ಸರಕಾರ ಸರಕಾರ ರೂಪಿಸಿರುವ ನಿಯಮಾವಳಿಗಳನ್ನು ಅನುಸರಿಸಲಿ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಕ್ಯಾಸಿನೋ ಪ್ರವಾಸೋದ್ಯಮಕ್ಕೆ ಅವಕಾಶವಿಲ್ಲ: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಹೆಸರಿನಲ್ಲಿ ಕ್ಯಾಸಿನೋ ಸಂಸ್ಕೃತಿಯನ್ನು ಉತ್ತೇಜಿಸುವ ಯಾವುದೇ ಯೋಜನೆ ಸರಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಹೆಲ್ತ್ ಟೂರಿಸಮ್‌ಗೆ ಸರಕಾರದ ನೆರವು: ಮಂಗಳೂರು ಭಾಗದಲ್ಲಿ ಆಸ್ಪತ್ರೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇದೆ. ಹೀಗಾಗಿ ಇಲ್ಲಿ ಹೆಲ್ತ್ ಟೂರಿಸಮ್ ಸಾಧ್ಯತೆಯ ಬಗ್ಗೆ ಸರಕಾರದ ನಿಲುವು ಏನು ? ಎಂಬ ಪ್ರಶ್ನೆಗೆ ಹೆಲ್ತ್ ಟೂರಿಸಮ್ ವಿಚಾರದಲ್ಲಿ ಇಲ್ಲಿ ಇರುವ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಸರಕಾರ ಅದಕ್ಕೆ ಬೇಕಾದ ನೆರವು ನೀಡಲಿದೆ ಎಂದು ಸಚಿವ ಜಾರ್ಜ್ ನುಡಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಾಜಿ ಶಾಸಕ ಜೆ.ಆರ್. ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

Leave a Reply