ಮಂಗಳೂರು:ಎಕ್ಕೂರು ಬಾಬಾ ಅಲಿಯಾಸ್ ಶುಭಕರ ಶೆಟ್ಟಿ ಕೊರೊನಾ ಸೋಂಕಿಗೆ ಬಲಿ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಒಂದು ಕಾಲದಲ್ಲಿ ಕರಾವಳಿಯಲ್ಲಿ ತನ್ನದೇ ಆದ ಗ್ಯಾಂಗ್ ಕಟ್ಟಿಕೊಂಡು ಸದ್ದು ಮಾಡಿದ್ದ ಎಕ್ಕೂರು ಬಾಬಾ ಅಲಿಯಾಸ್ ಶುಭಕರ ಶೆಟ್ಟಿ (61) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಮಂಗಳೂರಿನ ಮಂಗಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಕ್ಕುರು ಬಾಬಾ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಒಂದು ವಾರದ ಹಿಂದೆ ಇವರ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ನಂತರ ಇವರಿಗೆ ಜ್ವರ ಬಂದಿದ್ದು ಅದಕ್ಕಾಗಿ ಮಂಗಳಾ ಆಸ್ಪತ್ರೆಗೆ ಹೋದಾಗ ಅಲ್ಲಿ ಕೊವಿಡ್ ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಒಂದು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

ಎಕ್ಕೂರು ಬಾಬಾ ಕಳೆದ ಹತ್ತು ವರ್ಷಗಳಲ್ಲಿ ರೌಡಿಸಂನಿಂದ ದೂರವಿದ್ದು  ಹಿಂದು ಸಂಘಟನೆಗಳಲ್ಲಿ  ತೊಡಗಿಸಿಕೊಂಡಿದ್ದರು.