ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು – Vishwanews24

Featured, ರಾಜ್ಯ ನ್ಯೂಸ್

 ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು

ಬೆಳಗಾವಿ: ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.

ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು ಹಾಕಿಕೊಂಡಿದ್ದಾರೆ.

ಇಂದಿನಂತೆ ಸೋಮವಾರ ಬೆಳಿಗ್ಗೆ ಅವರ ಸೇವಕ ಶ್ರೀಗಳನ್ನು ನಿದ್ದೆಯಿಂದ ಎಬ್ಬಿಸಲು ಹೋದರು. ಮಲಗುವ ಕೋಣೆಯ ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಲಾಗಿತ್ತು. ಎಷ್ಟು ಹೊತ್ತು ಕೂಗಿದರೂ ಸ್ವಾಮೀಜಿ ಓಗೊಡಲಿಲ್ಲ. ಬಳಿಕ ಕಿಟಕಿಯನ್ನು ತಳ್ಳಿ ಇಣುಕಿದಾಗ ಅವರು ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡರೂ ಪೂರ್ಣ ತನಿಖೆಯ ನಂತರ ಸಾವಿನ ರೀತಿ ಗೊತ್ತಾಗಲಿದೆ. ಸಾವಿಗೆ ನಿಖರ ಕಾರಣ ಏನು ಎಂಬುದು ಸದ್ಯ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಕರಾವಳಿ ಭಾಗದಲ್ಲಿ ಸೆ. 5ರಿಂದ 8 ರವರೆಗೆ ಎಲ್ಲೋ ಅಲರ್ಟ್‌ – Vishwanews24

Leave a Reply