ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು – vishwanews24

Featured, ಉಡುಪಿ

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಜೂ. 14ರ ಶುಕ್ರವಾರ ತಡರಾತ್ರಿ ನಡೆದಿದೆ.

ಫೋರ್ಡ್ ಫಿಗೋ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದ್ದು ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಸ್ಟೋನ್ ಹಾರಿ ಪಕ್ಕದಲ್ಲಿದ್ದ ಬೈಕ್‌ಗೆ ಸಾಕಷ್ಟು ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉದ್ಯಾವರ : ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು – vishwanews24

Leave a Reply