ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ ; ಅಂಗದಾನದ ಮೂಲಕ ಸಾರ್ಥಕತೆ ಮೆರೆದ ವ್ಯಕ್ತಿಯ ಕುಟುಂಬ – vishwanews24
ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ ; ಅಂಗದಾನದ ಮೂಲಕ ಸಾರ್ಥಕತೆ ಮೆರೆದ ವ್ಯಕ್ತಿಯ ಕುಟುಂಬ
ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಅನಂತರ ಅಂಗದಾನದ ಮೂಲಕ ಇತರರಿಗೆ ಜೀವ ನೀಡಿ ಸಾರ್ಥಕತೆ ಮೆರೆದ ಘಟನೆ ನಡೆದಿದೆ.
ಕುಂದಾಪುರದ ನಿವಾಸಿ ರಾಘವೇಂದ್ರ(35) ಅವರಿಗೆ ಫೆ.17ರಂದು ಮಧ್ಯರಾತ್ರಿ 12.20 ವೇಳೆಗೆ ರಸ್ತೆ ಅಪಘಾತ ನಡೆಯಿತು. ತೀವ್ರ ಗಾಯಗಳ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು.
ಸಂಪೂರ್ಣ ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ರಾಘವೇಂದ್ರ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿಯು ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು.
ಅವರ ಕುಟುಂಬವು ಅವರ ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ನಿರ್ಧಾರವನ್ನು ತೆಗೆದುಕೊಂಡರು. ಆ ಮೂಲಕ ಅಗತ್ಯವಿರುವ ಇತರರಿಗೆ ಅಂಗ ದಾನ ಮಾಡಲು ನಿರ್ಧರಿಸಲಾಯಿತು.
ಅದರಂತೆ ರಾಘವೇಂದ್ರ ಅವರ ಒಂದು ಕಿಡ್ನಿ ಮತ್ತು ಯಕೃತ್ತನ್ನು ಮಂಗಳೂರಿನ ಎಜೆ ಆಸ್ಪತ್ರೆ, ಶ್ವಾಸಕೋಶವನ್ನು ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಗೆ ಹಾಗೂ ಒಂದು ಕಿಡ್ನಿ ಎರಡು ಕಾರ್ನಿಯಾ ಮತ್ತು ಚರ್ಮವನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲು ಉಳಿಸಿಕೊಳ್ಳಲಾಯಿತು .
